Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:23 - ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು, ಯೆಹೋವನ ಆಜ್ಞೆಯ ಪ್ರಕಾರ ಡೇರೆಗಳನ್ನು ಕಿತ್ತು ಹೊರಡುವರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:23
11 ತಿಳಿವುಗಳ ಹೋಲಿಕೆ  

ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ.


ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು:


ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.


ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.


ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.


ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಆಗ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಪ್ರಯಾಣಮಾಡಿದ್ದು ಇದು ಮೊದಲನೇ ಸಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು