ಅರಣ್ಯಕಾಂಡ 9:7 - ಕನ್ನಡ ಸಮಕಾಲಿಕ ಅನುವಾದ7 ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮನುಷ್ಯ ಶವ ಸೋಂಕಿದದರಿಂದ ನಾವು ಅಶುದ್ಧರಾದೆವು. ನಾವು ವಿುಕ್ಕ ಇಸ್ರಾಯೇಲ್ಯರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವದಕ್ಕೆ ಅಪ್ಪಣೆಯಿಲ್ಲವೋ ಎಂದು ಕೇಳಲು ಮೋಶೆ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |