ಆದಿಕಾಂಡ 1:12 - ಕನ್ನಡ ಸಮಕಾಲಿಕ ಅನುವಾದ12 ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು. ಅಧ್ಯಾಯವನ್ನು ನೋಡಿ |