Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:14 - ಕನ್ನಡ ಸಮಕಾಲಿಕ ಅನುವಾದ

14 ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಈ ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಈ ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:14
43 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.


ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.


ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.


ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


“ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.


ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,


ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ.


ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.


“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.


ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.


ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ, ಏಕೆಂದರೆ ಸೃಷ್ಟಿಗಳೆಲ್ಲವೂ ನಿಮ್ಮ ಸೇವೆಯನ್ನು ಮಾಡುತ್ತವೆ.


ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ?


ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.


ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.


ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.


ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು