ಆದಿಕಾಂಡ 1:20 - ಕನ್ನಡ ಸಮಕಾಲಿಕ ಅನುವಾದ20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು. ಅಧ್ಯಾಯವನ್ನು ನೋಡಿ |