ಆದಿಕಾಂಡ 1:24 - ಕನ್ನಡ ಸಮಕಾಲಿಕ ಅನುವಾದ24 ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |