Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:4 - ಕನ್ನಡ ಸಮಕಾಲಿಕ ಅನುವಾದ

4 ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರು ಆ ಬೆಳಕನ್ನು ಒಳ್ಳೇದೆಂದು ನೋಡಿದನು. ದೇವರು ಬೆಳಕನ್ನೂ ಕತ್ತಲೆಯನ್ನೂ ಬೇರೆ ಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:4
10 ತಿಳಿವುಗಳ ಹೋಲಿಕೆ  

ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ.


ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.


ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.


ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು