Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:6 - ಕನ್ನಡ ಸಮಕಾಲಿಕ ಅನುವಾದ

6 ನಂತರ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಗುಮ್ಮಟವಾಗಲಿ, ಅದು ನೀರಿನಿಂದ ಭೂಮಿಯನ್ನು ಪ್ರತ್ಯೇಕ ಮಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಳಿಕ ದೇವರು - ಜಲಸಮೂಹಗಳ ನಡುವೆ ವಿಸ್ತಾರವಾದ ಗುಮಟವು ಉಂಟಾಗಲಿ; ಅದು ಕೆಳಗಣ ನೀರುಗಳನ್ನೂ ಮೇಲಣ ನೀರುಗಳನ್ನೂ ಬೇರೆ ಬೇರೆ ಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:6
23 ತಿಳಿವುಗಳ ಹೋಲಿಕೆ  

ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ?


“ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ; ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.


ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.


ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ.


ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.


ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ.


ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.


ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.


ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.


ಹಗಲೆಲ್ಲಾ ಅವು ಮಾತನಾಡುತ್ತವೆ; ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು