Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:1 - ಕನ್ನಡ ಸಮಕಾಲಿಕ ಅನುವಾದ

1 ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೋಹನ ಮಕ್ಕಳಾದ ಶೇಮ್ ಹಾಮ್ ಯೆಫೆತರ ವಂಶದವರ ಚರಿತ್ರೆಯು - ಜಲಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೋಹನ ಗಂಡುಮಕ್ಕಳು: ಶೇಮ್, ಹಾಮ್ ಮತ್ತು ಯೆಫೆತ್. ಜಲಪ್ರಳಯದ ನಂತರ ಈ ಮೂವರು ಅನೇಕ ಗಂಡುಮಕ್ಕಳನ್ನು ಪಡೆದರು. ಶೇಮನಿಗೂ ಹಾಮನಿಗೂ ಯೆಫೆತನಿಗೂ ಹುಟ್ಟಿದ ಗಂಡುಮಕ್ಕಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:1
12 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.


ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.


ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.


ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.


ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು