Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:1 - ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜಲಪ್ರಳಯದ ನಂತರ ಇಡೀ ಪ್ರಪಂಚದ ಜನರು ಒಂದೇ ಭಾಷೆಯನ್ನು ಮಾತಾಡುತ್ತಿದ್ದರು. ಎಲ್ಲಾ ಜನರು ಒಂದೇ ಭಾಷೆಯ ಪದಗಳನ್ನು ಬಳಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:1
6 ತಿಳಿವುಗಳ ಹೋಲಿಕೆ  

ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”


ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.


ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.


ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು