ಆದಿಕಾಂಡ 12:10 - ಕನ್ನಡ ಸಮಕಾಲಿಕ ಅನುವಾದ10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು. ಅಧ್ಯಾಯವನ್ನು ನೋಡಿ |