Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:13 - ಕನ್ನಡ ಸಮಕಾಲಿಕ ಅನುವಾದ

13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:13
18 ತಿಳಿವುಗಳ ಹೋಲಿಕೆ  

ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.


ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.


ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು.


ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.


ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು