ಆದಿಕಾಂಡ 12:16 - ಕನ್ನಡ ಸಮಕಾಲಿಕ ಅನುವಾದ16 ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರತರಿಸಿ ಆಕೆಯ ನಿವಿುತ್ತ ಅಬ್ರಾಮನಿಗೆ ಉಪಕಾರ ಮಾಡಿದನು. ಆಗ ಅಬ್ರಾಮನಿಗೆ ಕುರಿದನಗಳೂ ಗಂಡು ಹೆಣ್ಣು ಕತ್ತೆಗಳೂ ದಾಸದಾಸಿಯರೂ ಒಂಟೆಗಳೂ ದೊರೆತವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |