Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:19 - ಕನ್ನಡ ಸಮಕಾಲಿಕ ಅನುವಾದ

19 ‘ಆಕೆಯು ನನ್ನ ಸಹೋದರಿ,’ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವುದರಲ್ಲಿದ್ದೆನು. ಆದರೆ ಈಗ, ನಿನ್ನ ಹೆಂಡತಿ, ಈಕೆಯನ್ನು ನೀನು ಕರೆದುಕೊಂಡು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆ ನಿನ್ನ ಹೆಂಡತಿಯೆಂದು ನನಗೇಕೆ ತಿಳಿಸಲಿಲ್ಲ? ತಂಗಿಯೆಂದು ಏಕೆ ಹೇಳಿದೆ? ಹಾಗೆ ಹೇಳಿದ್ದರಿಂದಲೆ ಆಕೆ ನನಗೆ ಹೆಂಡತಿಯಾಗಲೆಂದು ಕರೆಸಿಕೊಂಡೆ. ಇಗೋ ನಿನ್ನ ಹೆಂಡತಿ! ಕರೆದುಕೊಂಡು ಇಲ್ಲಿಂದ ತೆರಳು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:19
4 ತಿಳಿವುಗಳ ಹೋಲಿಕೆ  

ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?


ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.


ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು