ಆದಿಕಾಂಡ 12:4 - ಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಹೇಳಿದ ಮೇರೆಗೆ ಅಬ್ರಾಮನು ಹೊರಟುಹೋದನು; ಲೋಟನೂ ಸಂಗಡ ಹೋದನು. ಅಬ್ರಾಮನು ಖಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಧ್ಯಾಯವನ್ನು ನೋಡಿ |