ಆದಿಕಾಂಡ 12:5 - ಕನ್ನಡ ಸಮಕಾಲಿಕ ಅನುವಾದ5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿ |