Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:6 - ಕನ್ನಡ ಸಮಕಾಲಿಕ ಅನುವಾದ

6 ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:6
20 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.


ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.


ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.


ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,


ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.


ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.


ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು