Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:7
55 ತಿಳಿವುಗಳ ಹೋಲಿಕೆ  

ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.


ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.


ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.


ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


“ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.


ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?


ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು