Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ ಲೋಟನನ್ನೂ ಸಂಗಡ ಕರಕೊಂಡು ಐಗುಪ್ತ ದೇಶವನ್ನು ಬಿಟ್ಟು ಕಾನಾನ್‍ದೇಶದ ದಕ್ಷಿಣ ಪ್ರಾಂತ್ಯಕ್ಕೆ ಏರಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:1
8 ತಿಳಿವುಗಳ ಹೋಲಿಕೆ  

ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.


ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.


ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು