Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:10 - ಕನ್ನಡ ಸಮಕಾಲಿಕ ಅನುವಾದ

10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:10
26 ತಿಳಿವುಗಳ ಹೋಲಿಕೆ  

ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,


ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.


ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.


ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.


ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.


“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.


ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.


ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.


ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.


ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.


ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು