Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:13 - ಕನ್ನಡ ಸಮಕಾಲಿಕ ಅನುವಾದ

13 ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:13
27 ತಿಳಿವುಗಳ ಹೋಲಿಕೆ  

ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು