ಆದಿಕಾಂಡ 13:18 - ಕನ್ನಡ ಸಮಕಾಲಿಕ ಅನುವಾದ18 ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿ |