Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:10 - ಕನ್ನಡ ಸಮಕಾಲಿಕ ಅನುವಾದ

10 ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:10
12 ತಿಳಿವುಗಳ ಹೋಲಿಕೆ  

ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.


ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.


“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.


ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.


ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.


ಏಲಾಮಿನ ಅರಸ ಕೆದೊರ್ಲಗೋಮರನಿಗೂ ಗೋಯಿಮದ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸ ಅಮ್ರಾಫೆಲನಿಗೂ ಎಲ್ಲಸಾರಿನ ಅರಸ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಹೀಗೆ ನಾಲ್ವರು ಅರಸರಿಗೆ ವಿರೋಧವಾಗಿ ಐದು ಮಂದಿ ಅರಸರು ಎದುರಿಸಿದರು.


ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.


ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.


ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು