Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:12 - ಕನ್ನಡ ಸಮಕಾಲಿಕ ಅನುವಾದ

12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗ ಲೋಟನನ್ನು ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೊದೋವಿುನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ರಾಮನ ಸಹೋದರನಾದ ಲೋಟನು ಸೊದೋಮಿನಲ್ಲಿ ವಾಸವಾಗಿದ್ದನು. ಶತ್ರುಗಳು ಅವನನ್ನು ಸೆರೆಹಿಡಿದು, ಅವನ ಸ್ವತ್ತುಗಳನ್ನೆಲ್ಲ ದೋಚಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:12
13 ತಿಳಿವುಗಳ ಹೋಲಿಕೆ  

ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.


ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.


ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು