ಆದಿಕಾಂಡ 14:16 - ಕನ್ನಡ ಸಮಕಾಲಿಕ ಅನುವಾದ16 ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತೆಗೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ ಸೆರೆಯಲ್ಲಿದ್ದ ಸ್ತ್ರೀಯರನ್ನೂ ವಿುಕ್ಕಾದವರನ್ನೂ ತೆಗೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಮೇಲೆ ಶತ್ರುಗಳು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಮತ್ತು ಲೋಟನ ಆಸ್ತಿಯನ್ನು ಅಬ್ರಾಮನು ತೆಗೆದುಕೊಂಡು ಲೋಟನೊಡನೆ ಬಂದನು. ಅಲ್ಲದೆ ಸೆರೆಹಿಡಿಯಲ್ಪಟ್ಟಿದ್ದ ಸ್ತ್ರೀಯರನ್ನು ಮತ್ತು ಇತರ ಜನರನ್ನು ಹಿಂದಕ್ಕೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿ |