Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:3 - ಕನ್ನಡ ಸಮಕಾಲಿಕ ಅನುವಾದ

3 ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:3
9 ತಿಳಿವುಗಳ ಹೋಲಿಕೆ  

ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.


ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,


ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು