Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:9 - ಕನ್ನಡ ಸಮಕಾಲಿಕ ಅನುವಾದ

9 ಏಲಾಮಿನ ಅರಸ ಕೆದೊರ್ಲಗೋಮರನಿಗೂ ಗೋಯಿಮದ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸ ಅಮ್ರಾಫೆಲನಿಗೂ ಎಲ್ಲಸಾರಿನ ಅರಸ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಹೀಗೆ ನಾಲ್ವರು ಅರಸರಿಗೆ ವಿರೋಧವಾಗಿ ಐದು ಮಂದಿ ಅರಸರು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಂದರೆ ಏಲಾಮಿನ ರಾಜನಾದ ಕೆದೊರ್ಲಗೋಮರ್, ಗೋಯಿಮದ ರಾಜನಾದ ತಿದ್ಗಾಲ, ಶಿನಾರ್ ಅರಸನಾದ ಅಮ್ರಾಫೆಲ್, ಎಲ್ಲಸಾರಿನ ರಾಜನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ಎಂಬ ತಗ್ಗಿನಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಲಾಮನ ಅರಸ ಕೆದೊರ್ಲಗೋಮರ್, ಗೋಯಿಮದ ಅರಸ ತಿದ್ಗಾಲ, ಬಾಬಿಲೋನಿನ ಅರಸ ಅಮ್ರಾಫೆಲ, ಎಲ್ಲಸಾರಿನ ಅರಸ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ತಗ್ಗುಪ್ರದೇಶದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಂದರೆ ಏಲಾವಿುನ ಅರಸನಾದ ಕೆದೂರ್ಲಗೋಮರ್, ಗೋಯಿಮದ ಅರಸನಾದ ತಿದ್ಗಾಲ, ಶಿನಾರಿನ ಅರಸನಾದ ಅಮ್ರಾಫೆಲ, ಎಲ್ಲಸಾರಿನ ಅರಸನಾದ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮೆಂಬ ತಗ್ಗುಮೈದಾನದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಏಲಾಮಿನ ರಾಜ ಕೆದೊರ್ಲಗೋಮರನಿಗೂ ಗೋಯಿಮದ ರಾಜ ತಿದ್ಗಾಲನಿಗೂ ಶಿನಾರಿನ ರಾಜ ಅಮ್ರಾಫೆಲನಿಗೂ, ಎಲ್ಲಸಾರಿನ ರಾಜ ಅರಿಯೋಕನಿಗೂ ವಿರುದ್ಧವಾಗಿ ಹೋರಾಡಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರ ವಿರುದ್ಧವಾಗಿ ಹೋರಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:9
5 ತಿಳಿವುಗಳ ಹೋಲಿಕೆ  

ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:


ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,


ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು