ಆದಿಕಾಂಡ 15:13 - ಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು. ಅಧ್ಯಾಯವನ್ನು ನೋಡಿ |