ಆದಿಕಾಂಡ 15:14 - ಕನ್ನಡ ಸಮಕಾಲಿಕ ಅನುವಾದ14 ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು. ಅಧ್ಯಾಯವನ್ನು ನೋಡಿ |