ಆದಿಕಾಂಡ 15:2 - ಕನ್ನಡ ಸಮಕಾಲಿಕ ಅನುವಾದ2 ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಅಬ್ರಾಮನು - ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನಾಗಿ ಹೋಗುವೆನಾದದರಿಂದ ನನ್ನ ಆಸ್ತಿಯೆಲ್ಲಾ ದಮಸ್ಕದ ಎಲೀಯೆಜರನ ಪಾಲಾಗುವದಲ್ಲಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |