Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:6 - ಕನ್ನಡ ಸಮಕಾಲಿಕ ಅನುವಾದ

6 ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:6
10 ತಿಳಿವುಗಳ ಹೋಲಿಕೆ  

ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.


ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು