Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:7 - ಕನ್ನಡ ಸಮಕಾಲಿಕ ಅನುವಾದ

7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:7
16 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.


ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.


ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.


ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು