Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:12 - ಕನ್ನಡ ಸಮಕಾಲಿಕ ಅನುವಾದ

12 ಅವನು ಕಾಡುಕತ್ತೆಯಂತೆ ಇರುವನು. ಪ್ರತಿಯೊಬ್ಬರಿಗೂ ವಿರೋಧವಾಗಿ ಅವನು ಕೈ ಎತ್ತುವನು, ಪ್ರತಿಯೊಬ್ಬರ ಕೈಯೂ ಅವನ ವಿರೋಧವಾಗಿ ಇರುವುದು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಕಾಡುಗತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರ ಎದುರುಗಡೆಯೇ ವಾಸವಾಗಿರುವನು ಎಂದು ಹೇಳಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಷ್ಮಾಯೇಲನು ಕಾಡುಕತ್ತೆಯಂತೆ ಗಡುಸಾಗಿದ್ದು ಸ್ವತಂತ್ರವಾಗಿರುವನು. ಅವನು ಪ್ರತಿಯೊಬ್ಬರಿಗೂ ವಿರೋಧವಾಗಿರುವನು; ಪ್ರತಿಯೊಬ್ಬರೂ ಅವನಿಗೆ ವಿರೋಧವಾಗಿರುವರು. ಅವನು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಾ ತನ್ನ ಸಹೋದರರ ಸಮೀಪದಲ್ಲಿ ವಾಸಿಸಿದರೂ ಅವರಿಗೆ ವಿರೋಧವಾಗಿರುವನು.” ಎಂದು ಹೇಳಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:12
7 ತಿಳಿವುಗಳ ಹೋಲಿಕೆ  

ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.


ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.


ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.


ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”


ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.


ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು