Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:7
13 ತಿಳಿವುಗಳ ಹೋಲಿಕೆ  

ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.


ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.


ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.


ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.


ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,


ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.


ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,


ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.


ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು