ಆದಿಕಾಂಡ 16:8 - ಕನ್ನಡ ಸಮಕಾಲಿಕ ಅನುವಾದ8 “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.