Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:11 - ಕನ್ನಡ ಸಮಕಾಲಿಕ ಅನುವಾದ

11 ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:11
9 ತಿಳಿವುಗಳ ಹೋಲಿಕೆ  

ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.


ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.


“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.


ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.


ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು