ಆದಿಕಾಂಡ 17:17 - ಕನ್ನಡ ಸಮಕಾಲಿಕ ಅನುವಾದ17 ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, "ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು. ಅಧ್ಯಾಯವನ್ನು ನೋಡಿ |