ಆದಿಕಾಂಡ 17:19 - ಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ದೇವರು, “ನಿಶ್ಚಯವಾಗಿ ನಿನ್ನ ಹೆಂಡತಿ ಸಾರಳು ಮಗನನ್ನು ಹೆರುವಳು. ಅವನಿಗೆ, ‘ಇಸಾಕ್’ ಎಂದು ಹೆಸರಿಡಬೇಕು. ಅವನ ಸಂಗಡವೂ ಅವನ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡವೂ ನಾನು ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿ |