Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:2 - ಕನ್ನಡ ಸಮಕಾಲಿಕ ಅನುವಾದ

2 ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು. ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ವೃದ್ಧಿಪಡಿಸುವೆನು,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ನಿನಗೆ ಕೊಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಸಂಗಡ ನಾನು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ: ನಿನಗೆ ಅಧಿಕಾಧಿಕವಾದ ಸಂತತಿಯನ್ನು ಕೊಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಅತ್ಯಧಿಕವಾದ ಸಂತತಿಯನ್ನು ಕೊಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:2
14 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು