ಆದಿಕಾಂಡ 17:20 - ಕನ್ನಡ ಸಮಕಾಲಿಕ ಅನುವಾದ20 ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು. ಅಧ್ಯಾಯವನ್ನು ನೋಡಿ |