Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:24 - ಕನ್ನಡ ಸಮಕಾಲಿಕ ಅನುವಾದ

24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಬತ್ತೊಂಬತ್ತು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಬ್ರಹಾಮನಿಗೆ ಸುನ್ನತಿ ಆದಾಗ ಅವನಿಗೆ ತೊಂಬತ್ತೊಂಬತ್ತು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರುಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:24
8 ತಿಳಿವುಗಳ ಹೋಲಿಕೆ  

ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.


ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.


ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು