Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:5 - ಕನ್ನಡ ಸಮಕಾಲಿಕ ಅನುವಾದ

5 ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲ ಪಿತೃವಾಗಿ ನೇವಿುಸಿರುವದರಿಂದ ನಿನಗೆ ಅಬ್ರಹಾಮನೆಂದು ಹೆಸರಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:5
16 ತಿಳಿವುಗಳ ಹೋಲಿಕೆ  

“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.


ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.


ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.


ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.


ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು