ಆದಿಕಾಂಡ 18:10 - ಕನ್ನಡ ಸಮಕಾಲಿಕ ಅನುವಾದ10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು. ಅಧ್ಯಾಯವನ್ನು ನೋಡಿ |