Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸಾರಳು ಭಯಪಟ್ಟು - ನಾನು ನಗಲಿಲ್ಲ ಎಂದು ಬೊಂಕಲು ಆತನು- ಹಾಗನ್ನಬೇಡಮ್ಮಾ, ನೀನು ನಕ್ಕದ್ದುಂಟು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:15
17 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು;


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?


ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.


ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.


ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.


ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು