Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:18 - ಕನ್ನಡ ಸಮಕಾಲಿಕ ಅನುವಾದ

18 ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ರಹಾಮನಿಂದ ಬಲಿಷ್ಠವಾದ ಮಹಾಜನಾಂಗ ಹುಟ್ಟುವುದು; ಅವನ ಮೂಲಕ ಈ ಲೋಕದ ಜನರೆಲ್ಲರೂ ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:18
9 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು