Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:23
15 ತಿಳಿವುಗಳ ಹೋಲಿಕೆ  

ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.


ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.


ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?


ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು