Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:24 - ಕನ್ನಡ ಸಮಕಾಲಿಕ ಅನುವಾದ

24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:24
8 ತಿಳಿವುಗಳ ಹೋಲಿಕೆ  

“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು