Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:30 - ಕನ್ನಡ ಸಮಕಾಲಿಕ ಅನುವಾದ

30 ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅಬ್ರಹಾಮನು - ಸ್ವಾಮೀ, ಕೋಪಮಾಡಬಾರದು; ಇನ್ನೂ ಮಾತಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:30
12 ತಿಳಿವುಗಳ ಹೋಲಿಕೆ  

ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.


ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು