Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:31 - ಕನ್ನಡ ಸಮಕಾಲಿಕ ಅನುವಾದ

31 ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು, “ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು,” ಎನ್ನಲು, ಸರ್ವೇಶ್ವರ, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು - ಇಗೋ, ಸ್ವಾವಿುಯ ಸಂಗಡ ಮಾತಾಡುವದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಇಪ್ಪತ್ತು ಮಂದಿಯಿದ್ದರೆ ಅವರ ನಿವಿುತ್ತ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:31
10 ತಿಳಿವುಗಳ ಹೋಲಿಕೆ  

ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.


ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು