Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:33 - ಕನ್ನಡ ಸಮಕಾಲಿಕ ಅನುವಾದ

33 ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:33
9 ತಿಳಿವುಗಳ ಹೋಲಿಕೆ  

ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.


ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.


ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.


ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದರು.


ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.


ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು